ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ: ಹೊಸ ಸರ್ಕಾರ ರಚನೆಗೆ ಸಿದ್ಧತೆ
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ 10 ವರ್ಷಗಳಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ಭಾನುವಾರ ಅಂತ್ಯಗೊಂಡಿದೆ.
ಇತ್ತೀಚೆಗೆ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಅಂತ್ಯಗೊಂಡಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆಯುವ ಬಗ್ಗೆ ಭಾನುವಾರ ಅಧಿಸೂಚನೆ ಹೊರಡಿಸಿದೆ.
ಸಂವಿಧಾನದ ನಿಯಮ 239 ಮತ್ತು 239ಎ ಅನ್ವಯ ಕೇಂದ್ರ ಸರ್ಕಾರ ಹೊರಡಿಸಿದ್ದ ಕೇಂದ್ರಾಡಳಿತ ಪ್ರದೇಶದ ಆದೇಶ 2019, ಅಕ್ಟೋಬರ್ 31ರಂದು ರದ್ದಾಗಲಿದೆ. ಆದರೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ಆಡಳಿತ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ ಹಾಡಲಾಗಿದೆ.