BREAKING NEWSCINEMA

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Share

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ “ರುದ್ರಿ” ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಸೋಮವಾರ ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಿತು.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button