ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮಳೆ ಆಗಿದ್ದು, ದಿನದ ಬಹುತೇಕ ಸಮಯ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗಿದೆ.
ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.