ONLINE NEWS

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ನ.20 ಮತದಾನ, 23ರಂದು ಫಲಿತಾಂಶ

Share

ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ಘೋಷಣೆ ಮಾಡಿದೆ.

ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ಜಾರ್ಖಂಡ್ ನ 82 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ 13 ಮತ್ತು 20ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಲಿದೆ.

ಜಮ್ಮು ಕಾಶ್ಮೀರ ಮತ್ತು ಹರಿಯಾಣದಲ್ಲಿ ಯಶಸ್ವಿಯಾಗಿ ಚುನಾವಣೆ ನಡೆಸಿದ ನಂತರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ಚುನಾವಣೆಗೆ ಮುಂದಾಗಿದ್ದು, ಎರಡು ರಾಜ್ಯಗಳಲ್ಲಿ ಒಟ್ಟಾರೆ 12 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button