BREAKING NEWSKANNADAFLASHNEWSPOLITICAL NEWS
ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ.
ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
ಸಂಡೂರು ಕ್ಷೇತ್ರದಲ್ಲಿ ಈ.ತುಕರಾಮ್ ಲೋಕಸಭೆಯಲ್ಲಿ ಜಯ ಸಾಧಿಸಿದ್ದರಿಂದ ಅವರಿಂದ ತೆರವಾಗಿತ್ತು. ಹಾವೇರಿಯ ಶಿಗ್ಗಾಂವಿ ಕ್ಷೇತ್ರಕ್ಕೆ ಲೋಕಸಭೆ ಪ್ರವೇಶಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿತ್ತು.