BREAKING NEWSCITYKANNADAFLASHNEWS
ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಓಮರ್ ಅಬ್ದುಲ್ಲಾ!
ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 370ನೇ ವಿಧಿ ರದ್ದುಪಡಿಸಿ 10 ವರ್ಷದ ನಂತರ ಜಮ್ಮು ಕಾಶ್ಮೀರದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಯಿತು.
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ 8 ಶಾಸಕರ ಜೊತೆ ಪ್ರಮಾಣ ವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಮಾಣ ವಚನ ಬೋಧಿಸಿದರು.
ಮೈತ್ರಿ ಪಕ್ಷವಾದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ನೀಡಿದ್ದರೂ ಸರ್ಕಾರದ ಭಾಗವಾಗದೇ ಬಾಹ್ಯ ಬೆಂಬಲ ನೀಡಿದೆ.