BREAKING NEWSCITYKANNADAFLASHNEWS
ಮುಂಬೈನ 14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ: ಮೂವರು ದುರ್ಮರಣ
14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ದಾರುಣ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಭವಿಸಿದೆ.
ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ ನ ವಸತಿ ಸಂಕೀರ್ಣದ 10ನೇ ಮಹಡಿಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.
ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (72) ಮತ್ತು ಪೆಲುಬೆಟಾ (42) ಮೃತಪಟ್ಟ ದುರ್ದೈವಿಗಳು.
ದುರ್ಘಟನೆಯಲ್ಲಿ ಗಾಯಗೊಂಡಿದ್ದ ಮೂವರರನ್ನು ಸಮೀಪದ ಕೂಪರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.