BREAKING NEWSDISTRICTDISTRICT NEWS
ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಸರಣಿ ಅಪಘಾತ: ನಾಲ್ವರ ದುರ್ಮರಣ
ಕಾರು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕಲಬುರಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದೆ.
ಬೈಕ್ ಮತ್ತು ಕಾರಿನಲ್ಲಿದ್ದ ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮತ್ತು ಮೌಲಾಬಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್‌ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಲ್ಲಿ ತೇರಳುತ್ತಿದ್ದರು. ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಬಸಪ್ಪ ಡಘೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಟ್ರಾಫಿಕ್ 1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.