BREAKING NEWSCINEMA
ನಟ ಕಿಚ್ಚ ಸುದೀಪ್ ಗೆ ಮಾತೃ ವಿಯೋಗ: ಸಿನಿ ಗಣ್ಯರಿಂದ ಅಂತಿಮ ದರ್ಶನ
ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಸುದೀಪ್ ತಾಯಿ ಸರೋಜಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಿಗ್ಗೆ 7:04ಕ್ಕೆ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.
ಸರೋಜಾ ಅವರ ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ತಂದಿದ್ದು, ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.
ಸುದೀಪ್ ಅವರ ತಾಯಿಯ ಅಂತಿಮ ದರ್ಶನ ಪಡೆಯಲು ನಟಿ ತಾರಾ, ಡಾಲಿ ಧನಂಜಯ್, ಶಿವರಾಜ್ ಕುಮಾರ್, ಇಂದ್ರಜೀತ್ ಲಂಕೇಶ್, ರಕ್ಷಿತಾ ಪ್ರೇಮ್ ಮುಂತಾದವರು ಪಾಲ್ಗೊಂಡಿದ್ದರು.