ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾದ ಗೌರಿ ಲಂಕೇಶ್ ಹತ್ಯೆಯ ಆರೋಪಿ!
ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶ್ರೀಕಾಂತ್ ಪಂಗಾರ್ಕರ್ 2001ರಿಂದ 2008ರ ಅವಧಿಯಲ್ಲಿ ಶಿವಸೇನೆಯ ಜಲ್ನಾ ವಾರ್ಡ್ ಪಾಲಿಕೆ ಸದಸ್ಯರಾಗಿದ್ದರು. 2017. ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪೊಲೀಸರು ಬಂಧಿಸಿದ್ದರು.
ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆದ ಶ್ರೀಕಾಂತ್ ಪಂಗಾರ್ಕರ್ ಮಾಜಿ ಸಚಿವ ಅರ್ಜುನ್ ಖೋಡ್ಕರ್ ನೇತೃತ್ವದಲ್ಲಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಪರವಾಗಿ ಜಲ್ನಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಸ್ತುತ ಜಲ್ನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೈಲಾಶ್ ಗೋರಂಟೈಲ್ ಶಾಸಕರಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ನವೆಂಬರ್ 20ರಂದು ನಡೆಯಲಿದ್ದು, 23ರಂದು ಫಲಿತಾಂಶ ಹೊರಬೀಳಲಿದೆ.