BREAKING NEWSKANNADAFLASHNEWSPOLITICAL NEWS
ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಜೆಡಿಎಸ್ ಪಾಲು!
ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ.
ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿಲ್ಲ.
ಮೂಲಗಳ ಪ್ರಕಾರ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ.
ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದರೆ ಸಂಡೂರು ಕ್ಷೇತ್ರದಿಂದ ಬಳ್ಳಾರಿಯ ಸಂಡೂರು ವಿಭಾಗದ ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.