ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ಇಷ್ಟ ಇಲ್ವಾ?: ಸುಪ್ರೀಂಕೋರ್ಟ್ ಪ್ರಶ್ನೆ
ಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಮಾಜವಾದ ಮತ್ತು ಜಾತ್ಯತೀಯ ಭಾರತ ಸಂವಿಧಾನದ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಈ ಹಿಂದೆ ಹಲವಾರು ಬಾರಿ ನೀಡಿದ ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದು ಹೇಳಿತು.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ, 1976ರಲ್ಲಿ ಸಂಸತ್ ನಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗದೇ 42ನೇ ಸಂವಿಧಾನ ತಿದ್ದುಪಡಿಯಲ್ಲಿ ಈ ಬದಲಾವಣೆ ಮಾಡಲಾಗಿದ್ದು, ಸಮಾಜವಾದ ಮತ್ತು ಜಾತ್ಯಾತೀತ ಪದಗಳನ್ನು ಸೇರಿಸಲಾಗಿದೆ ಎಂದು ವಕೀಲ ವಿಷ್ಣು ಶಂಕರ್ ಜೈನ್ ಅವರ ವಾದವನ್ನು ಆಲಿಸಿತು.
ನ್ಯಾಯಮೂರ್ತಿ ಸಂಜೀವ್ ಖನ್ನಾ, ಎರಡೂ ಪದಗಳ ಅರ್ಥವನ್ನು ಪಾಶ್ಚಿಮಾತ್ಯ ಶೈಲಿಯಲ್ಲಿ ಅರ್ಥ ಮಾಡಿಕೊಳ್ಳಬೇಡಿ. ಸಮಾಜವಾದ ಎಂದರೆ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಬೇಕು ಎಂಬುದಾಗಿದೆ. ಜಾತ್ಯಾತೀತ ಎಂದರೆ ಎಲ್ಲಾ ಜಾತಿ ಮತ್ತು ಧರ್ಮವರನ್ನು ಒಳಗೊಂಡಂತೆ ಎಂಬ ಅರ್ಥ. ಅದನ್ನು ವಿಶೇಷ ರೀತಿಯಲ್ಲಿ ವ್ಯಾಖ್ಯಾನಿಸುವ ಅಗತ್ಯವಿಲ್ಲ. ಇದರ ಬಗ್ಗೆ ಸಾಕಷ್ಟು ತೀರ್ಪುಗಳು ಬಂದಿರುವುದನ್ನು ನೀವು ಗಮನಿಸಬೇಕು ಎಂದು ಸಲಹೆ ನೀಡಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿಕೆಯಿದ ಈ ನಿಯಮಗಳ ಮೇಲೆ ಪರಿಣಾಮ ಬೀರಿತು. ನ್ಯಾಯಮೂರ್ತಿಗಳೇ ಈ ಪದವನ್ನು ಸೂಕ್ತವಾಗಿ ವಿಶ್ಲೇಷಿಸಿರುವುದರಿಂದ ಪ್ರತ್ಯೇಕವಾಗಿ ನಾನು ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಪ್ರತಿವಾದಿ ಅಶ್ವಿನಿ ಉಪಾಧ್ಯಾಯ ತಿಳಿಸಿದರು.
ಈ ವೇಳೆ ವಿಷ್ಣು ಶಂಕರ್ ಜೈನ್ ವಾದ ಮಂಡಿಸಲು ಹೋದಾಗ, ನಿಮಗೆ ದೇಶ ಜಾತ್ಯಾತೀತ ರಾಷ್ಟ್ರವಾಗಿರುವುದು ಇಷ್ಟ ಇಲ್ಲವೇ ಎಂದು ಪ್ರಶ್ನಿಸಿದಾಗ, ನಾವು ಭಾರತ ಜಾತ್ಯಾತೀತ ರಾಷ್ಟ್ರ ಅಲ್ಲ ಎಂದು ಹೇಳುತ್ತಿಲ್ಲ. ಆದರೆ ವಿಧೇಯಕವನ್ನು ಪ್ರಶ್ನಿಸುತ್ತಿದ್ದೇವೆ ಎಂದರು.