BREAKING NEWSKANNADAFLASHNEWS
ಆಸ್ಟ್ರೇಲಿಯಾ ಸರಣಿಗೆ ಭಾರತ ಎ ತಂಡ ಪ್ರಕಟ: ಋತುರಾಜ್ ಗೆ ನಾಯಕ ಪಟ್ಟ!
ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ 15 ಸದಸ್ಯರ ಭಾರತ `ಎ’ ತಂಡ ಪ್ರಕಟಿಸಿರುವ ಬಿಸಿಸಿಐ, ಋತುರಾಜ್ ಗಾಯಕ್ವಾಡ್ ಅವರನ್ನು ನಾಯಕರನ್ನಾಗಿ ಆಯ್ಕೆಮಾಡಲಾಗಿದೆ.
ಬಿಸಿಸಿಐ ಆಯ್ಕೆ ಸಮಿತಿ ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಸೋಮವಾರ ಭಾರತ ಎ ತಂಡವನ್ನು ಪ್ರಕಟಿಸಿತು. ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.
ಭಾರತ ಎ ತಂಡ
ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ನಿತಿಶ್ ಕುಮಾರ್ ರೆಡ್ಡಿ, ದೇವದತ್ ಪಡಿಕ್ಕಲ್, ರಿಕ್ಕಿ ಭುವಿ, ಬಾಬಾ ಇಂದ್ರಜೀತ್, ಇಶಾನ್ ಕಿಶನ್ (ವಿ.ಕೀ.), ಅಭಿಷೇಕ್ ಪೊರೆಲ್ (ವಿ.ಕೀ.), ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಯಶ್ ದಯಾಲ್, ನವದೀಪ್ ಸೈನಿ, ಮಾನವ್ ಸುತ್ತಾರ್, ತನುಷ್ ಕೊಟ್ಯಾನ್.