ONLINE NEWS
ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಭಾರತ ಟೈಮ್ಸ್ ಸುದ್ದಿ :ಬೆಳಗಾವಿ: ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರದ ವತಿಯಿಂದ ಬೆಳಗಾವಿ ಮಹಾನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳ ಬಗ್ಗೆ ಎಲ್.ಇ.ಡಿ ವಾಹನಗಳ ಮೂಲಕ ಜಾಗೃತಿ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.
ಬೆಳಗಾವಿ ಮಹಾನಗರ ವ್ಯಾಪ್ತಿಯ ಐದು ಎಲ್.ಇ.ಡಿ ವಾಹನಗಳು 10 ದಿನಗಳ ಕಾಲ ಪ್ರತಿ ವಾರ್ಡ್‌ಮಟ್ಟದಲ್ಲಿ ರಸ್ತೆ ಅಪಘಾತದ ಕುರಿತು ಜಾಗೃತಿ ಮೂಡಿಸಲಿವೆ. ರಸ್ತೆ ಅಪಘಾತದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇದ್ದರು.