ONLINE NEWS

ಸಚಿವರ ಕಾರ್ಯಕ್ಕೆ ಫಲಾನುಭವಿಗಳು ಫುಲ್ ಖುಷ್.

Share

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.

ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊಂದಿಗೆ ಸಚಿವರು ಆಗಮಿಸಿದರು.

ಗೃಹ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ, ಎಲ್ಲರಿಗೂ ಯೋಜನೆಗಳನ್ನು ತಲುಪಿಸುವುದೇ ನಮ್ಮ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪವಂತಾಗಬೇಕು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ತಿಂಗಳು ಸಿಗುವ 2 ಸಾವಿರ ರೂಪಾಯಿ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸಹಾಯವಾಗಿದೆ. ಒಬ್ಬರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಂಥಾಲಯ ತೆರೆದರೆ, ಗದಗ ಗಜೇಂದ್ರದಢದ ಅತ್ತೆ-ಸೊಸೆ ಸೇರಿ ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ್ದಾರೆ. ಕಣ್ಣಿನ ಶಸ್ತ್ರಚಿಕಿತ್ಸೆ, ವೈದ್ಯಕೀಯ ಖರ್ಚು ವೆಚ್ಚಗಳು, ಮಕ್ಕಳಿಗೆ ಶಾಲಾ ಫೀಜು, ಮಕ್ಕಳಿಗೆ ಬೈಕ್ ಕೊಡಿಸಿರುವುದು.. ಹೀಗೆ ಅನೇಕ ರೂಪದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ ಬಡ ಮಹಿಳೆಯರಿಗೆ ಸಹಾಯವಾಗುತ್ತಿದೆ ಎಂದು ‌ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೃಹಲಕ್ಷ್ಮೀಯರ ಜೊತೆಗೆ ತೃತೀಯ ಲಿಂಗಿಯರಿಗೂ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸುವ ಕೆಲಸ ಆಗುತ್ತಿದೆ. ಯೋಜನೆಯಿಂದ ಆದ ಲಾಭದ ಬಗ್ಗೆ ಫಲಾನುಭವಿಗಳು ಹೇಳಿಕೊಳ್ಳುವಾಗ ಯೋಜನೆ ಜಾರಿಗೆ ತಂದಿದ್ದಕ್ಕೂ ಸಾರ್ಥಕ ಎನಿಸುತ್ತದೆ. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಬೇಕು ಎಂಬುದೇ ನಮ್ಮ ಆಸೆ ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಗೃಹಲಕ್ಷ್ಮೀ ಫಲಾನುಭವಿಗಳು ಸಂವಾದ ನಡೆಸಲಿದ್ದು, ವಿಧಾನಸಭೆ ಅಧಿವೇಶನದ ಕಲಾಪ ವೀಕ್ಷಣೆ ಮಾಡುವುದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು. – *ಸಚಿವರಿಗೆ ದೃಷ್ಟಿ ತೆಗೆದ ಮಂಗಳಮುಖಿಯರು*

ಮಂಗಳಮುಖಿಯರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ದೃಷ್ಟಿ ತೆಗೆದು ಶುಭ ಹಾರೈಸಿದರು.

ನಿಮ್ಮಿಂದ ನಮಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಸಿಗುತ್ತಿದೆ. ನಿಮಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವರಿಗೆ ಕೈಮುಗಿದ ಧನ್ಯವಾದ ಅರ್ಪಿಸಿದರು.

ಸಚಿವರಿಗೆ ಹೊಸ ಬೈಕ್ ತೋರಿಸಿದ ಫಲಾನುಭವಿ*

ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ಸಣ್ಣಕ್ಕಿ ಗೃಹಲಕ್ಷ್ಮಿಯ ಹಣ ಕೂಡಿಟ್ಟು, ಮಗನಿಗೆ ಬೈಕ್ ಕೊಡಿಸಲು ನೀಡಿರುವ ಹಿನ್ನೆಲೆಯಲ್ಲಿ ಅವರ ಮಗ ಬೆಳಗಾವಿಯ ಸಚಿವರ ನಿವಾಸಕ್ಕೆ ಆಗಮಿಸಿ, ಬೈಕ್ ತೋರಿಸಿ, ಖುಷಿ ಹಂಚಿಕೊಂಡರು.

ನಂತರ ಸಚಿವರು ಗೃಹಲಕ್ಷ್ಮೀಯರ ಜೊತೆಗೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button