ONLINE NEWS

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ.

Share

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ ಡಿ 26: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

ನಾಲ್ಕು ಮಂದಿ ನಮ್ಮ ಯೋಧರು ಅಪಘಾತದಲ್ಲಿ ಮರಣ ಹೊಂದಿರುತ್ತಾರೆ.

ದಯಾನಂದ ತಿರುಕಣ್ಣನವರ್ ಬೆಳಗಾವಿ, ಧನರಾಜ್ ಸುಭಾಷ್ ಚಿಕ್ಕೋಡಿ, ಮಹೇಶ್ ನಾಗಪ್ಪ ಬಾಗಲಕೋಟೆ ಹಾಗೂ ಅನೂಪ್ ಪೂಜಾರಿ ಕುಂದಾಪುರ ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅಂತ ಪ್ರಾರ್ಥನೆ ಮಾಡ್ತೀನಿ

ಸರ್ಕಾರದಿಂದ ಕುಟುಂಬ ವರ್ಗಕ್ಕೆ ಪರಿಹಾರ ನೀಡಲಾಗುವುದು ಎಂದು‌ ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಎಚ್.ಸಿ.ಮಹದೇವಪ್ಪ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಉಪಸ್ಥಿತರಿದ್ದರು.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button