ONLINE NEWS

ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ

Share

ಭಾರತ ಟೈಮ್ಸ್ ಸುದ್ದಿ :ಬೆಳಗಾವಿ: ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಆಯ್ಕೆಯಾಗಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರಕಾರದ ಪ್ರತಿಷ್ಠಿತ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಕ್ಕಾಗಿ ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಆಯ್ಕೆ ಮಾಡಲಾಗಿದೆ.

ಪಂಚ ಗ್ಯಾರಂಟಿಗಳಲ್ಲೇ ಅತ್ಯಂತ ದೊಡ್ಡದಾದ ಗೃಹಲಕ್ಷ್ಮೀ ಯೋಜನೆಯನ್ನು ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದ 1.25 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಯಶಸ್ವಿಯಾಗಿ ತಲುಪಿಸುತ್ತಿದ್ದಾರೆ. ತನ್ಮೂಲಕ ಮಹಿಳೆಯರ ಸ್ವಾವಲಂಬನೆಗೆ ಪ್ರಯತ್ನಿಸುತ್ತಿದ್ದಾರೆ.

ಜನವರಿ 12ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.


Share

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button